ಕಾಂಗ್ರೆಸ್ ಪಕ್ಷಕ್ಕೂ ಸಿದ್ದರಾಮೋತ್ಸವಕ್ಕೂ ಸಂಬಂಧವಿಲ್ಲ – ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು

ಕಾಂಗ್ರೆಸ್ ಪಕ್ಷಕ್ಕೂ ಸಿದ್ದರಾಮೋತ್ಸವಕ್ಕೂ ಸಂಬಂಧವಿಲ್ಲ ಎಂದು ಸಿದ್ದರಾಮೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಎಂದರೆ ವ್ಯಕ್ತಿ ಪೂಜೆ ಅಲ್ಲ. ಪಕ್ಷವನ್ನು ಮುಜುಗರಪಡಿಸುವ ಉದ್ದೇಶವೂ ನಮಗಿಲ್ಲ‌. ಪಕ್ಷದೊಳಗೆ ಹಾಗೂ ಹೊರಗೆ ಸಿದ್ದರಾಮಯ್ಯರ ಅನೇಕ ಅಭಿಮಾನಿಗಳು ಹಾಗೂ ಸ್ನೇಹಿತರು ಇದ್ದಾರೆ.‌ ಜೊತೆಗೆ ಅನೇಕ ಸಂಘ-ಸಂಸ್ಥೆಗಳಿವೆ. ಇವರೆಲ್ಲ ಸೇರಿ ಆಯೋಜಿಸಿರುವ ಕಾರ್ಯಕ್ರಮ ಇದಾಗಿ‍ದೆ. ಇದರಲ್ಲಿ ವೈಭವೀಕರಣದ ಉದ್ದೇಶ ಇಲ್ಲ. ಕಾರ್ಯಕ್ರಮದಲ್ಲಿ ಪಕ್ಷದ ಚಿಹ್ನೆ ಬಳಸುತ್ತಿಲ್ಲ‌ ಎಂದು ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

 

Leave a Reply

Your email address will not be published.