
ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ: ಸಚಿವ ಕೆ ಎಸ್ ಈಶ್ವರಪ್ಪ
ಬೆಂಗಳೂರು : ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು,ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು. ಇನ್ನೂ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳಿಗೆ ವೇತನ ಹೆಚ್ಚಳ ಮಾಡುವುದಕ್ಕೆ, ಆರೋಗ್ಯ ವಿಮೆ ನೀಡುವುದಕ್ಕೆ ಇಲಾಖೆಯಲ್ಲಿ ಅವಕಾಶ ಇದೆ. ಈಗ ಇರುವ ವೇತನ ಮತ್ತು ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬಹುದು ಎಂಬುದರ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಕೂಲಂಕಷ ಚರ್ಚೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.