ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿರಂತರ: ಯು.ಟಿ. ಖಾದರ್

ಬೆಂಗಳೂರು

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಾ ಇಲ್ವಾ ಅಂತ ನೋಡಲು ಧರಣಿ ಮಾಡುತ್ತಿಲ್ಲ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅದನ್ನು‌ ಖಂಡಿಸಿ ನಮ್ಮ ನೋವನ್ನು ವ್ಯಕ್ತಪಡಿಸಿ ಧರಣಿ ಮಾಡುತ್ತಿದ್ದೇವೆ. ಎಲ್ಲಿತನಕ ಆಗುತ್ತೋ ನೋಡೋಣ, ಈ ವಿಚಾರದಲ್ಲಿ ನಾವು ತಾರ್ಕಿಕ‌ ಅಂತ್ಯ ಕಾಣುತ್ತೇವೆ. ಎಂದು ವಿಧಾನಸೌಧದಲ್ಲಿ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ರಾಜ್ಯಾದ್ಯಂತ ಹೋರಾಟ ಮಾಡಲು ನಮ್ಮ ನಾಯಕರು ತೀರ್ಮಾನ ಮಾಡಿದ್ದಾರೆ ಅಂತ ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ತಿಳಿಸಿದರು.

Leave a Reply

Your email address will not be published.