Home KARNATAKA ಕೊರೊನಾ ಚಿಕಿತ್ಸೆ ;ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಗೆ ದಾರಿ ಮಾಡುತ್ತಿದೆಯಾ ಸರ್ಕಾರ ?

ಕೊರೊನಾ ಚಿಕಿತ್ಸೆ ;ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಗೆ ದಾರಿ ಮಾಡುತ್ತಿದೆಯಾ ಸರ್ಕಾರ ?

365
0
SHARE

ಬೆಂಗಳೂರು. ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಮುಂದಾಗುತ್ತಿದೆಯಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು, ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ರೆಫರೆನ್ಸ್ ಮಾಡುವ ಅಧಿಕಾರ ನೀಡಲಾಗುತ್ತಿದೆ.  ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಎರಡು ರೀತಿಯ ದರವನ್ನು ಸರ್ಕಾರ ನಿಗದಿ ಪಡಿಸಿದೆ. ಪ್ರತಿಯೊಂದು ಖಾಸಗಿ ಆಸ್ಪತ್ರೆಯಲ್ಲೂ ಸರ್ಕಾರ ರೆಫರ್ ಮಾಡುವ ರೋಗಿಗಳಿಗೆ ಶೇಕಡಾ 50 ರಷ್ಟು ಹಾಸಿಗೆಗಳನ್ನು ಮೀಸಲಿಡಲಾಗುತ್ತದೆ.

ಇದಕ್ಕೆ ಕೊರೊನಾ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರೇ ರೆಫರ್ ಮಾಡುತ್ತಾರೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ರೆಫರ್ ಆಗಿ ಬರುವ ರೋಗಿಗಳಿಗೆ ಒಂದು ದರ, ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ರೋಗಿಗಳಿಗೆ ಮತ್ತೊಂದು ದರ ನಿಗದಿ ಪಡಿಸಲಾಗಿದೆ. ಇದು ಖಾಸಗಿ ಆಸ್ಪತ್ರೆಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ವೈದ್ಯರ ನಡುವೆ ಕಮೀಷನ್ ವ್ಯವಹಾರಕ್ಕೆ ದಾರಿ ಮಾಡಿಕೊಡುವ ಸಾಧ್ಯತೆಗಳಿವೆ.

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಕೊರೊನಾ ಸೋಂಕಿತರನ್ನು ಬೆಡ್ ಖಾಲಿ ಇಲ್ಲವೆಂದು ಸರ್ಕಾರಿ ಆಸ್ಪತ್ರೆಗಳ ವೈದ್ಯರೇ ತಮಗೆ  ಸಂಪರ್ಕವಿರುವ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಿ ಕಳುಹಿಸುವ ವ್ಯವಹಾರಕ್ಕೆ ಈ ವ್ಯವಸ್ಥೆ ಅವಕಾಶ ಮಾಡಿಕೊಡುತ್ತದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ದರ ನಿಗದಿ ಮಾಡಿ, ಬೆಡ್ ಬ್ಲಾಗಿಂಗ್ ದಂಧೆಗೆ ದಾರಿ ಮಾಡಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here