ದೇಶದಲ್ಲಿ ಒಂದೇ ದಿನ 25,920 ಮಂದಿಗೆ ಕೊರೋನಾ ಸೋಂಕು..! 492 ಜನರು ಬಲಿ

ರಾಷ್ಟ್ರೀಯ

ನವದೆಹಲಿ: ದೇಶದಲ್ಲಿ ಕೋವಿಡ್​ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆ ದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 492 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 2,92,092 ಸಕ್ರಿಯ ಪ್ರಕರಣಗಳಿವೆ. ನಿನ್ನೆಗಿಂತ 4,837 ಕಡಿಮೆ ಹೊಸ ಸೋಂಕಿತ ಪ್ರಕರಣಗಳು ಇಂದು ವರದಿಯಾಗಿದ್ದು, 66,254 ಮಂದಿ ಸೋಂಕಿನಿಂದ ಚೇತರಿಸಿ ಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,19,77,238ಕ್ಕೆ ಏರಿಕೆಯಾಗಿದೆ.

Leave a Reply

Your email address will not be published.