ಕೊರೊನಾಗೆ ಲಸಿಕೆಯೇ ರಾಮಭಾಣ: ಬೆಂಗಳೂರಿನಲ್ಲಿ ಮತ್ತಷ್ಟು ಇಳಿಕೆ ಕಂಡ ಸೋಂಕು

ಬೆಂಗಳೂರು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆಯಾಗಿದೆ. ಸುಮಾರು ಎರಡು ವರ್ಷಗಳ ಬಳಿಕ ಈ ಬೆಳವಣಿಗೆಗಳು ಕಂಡು ಬಂದಿದೆ. ನಗರದಲ್ಲಿ ಈ ಹಿಂದೆ ಪ್ರತೀನಿತ್ಯ 3000 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇದೀಗ ಬೆಂಗಳೂರು ನಗರ ಜಿಲ್ಲೆಯಲ್ಲಿ 10-18 ಪ್ರಕರಣಗಳು ಕಂಡು ಬರುತ್ತಿದೆ. ಜನರು ಲಸಿಕೆಗಳನ್ನು ಪಡೆದುಕೊಂಡ ಪರಿಣಾಮ,ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ. ಈ ಹಿನ್ನೆಲೆ ಸೋಂಕಿತರ ಪ್ರಮಾಣ ಇಳಿಕೆ ಕಂಡಿದೆ ಎನ್ನಲಾಗಿದೆ.

Leave a Reply

Your email address will not be published.