
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಆದೇಶವನ್ನು ವಾಪಸ್ ಪಡೆದ ರಾಜ್ಯ ಸರ್ಕಾರ
ಬೆಂಗಳೂರು: ವಿವಿಧ ನಿಗಮ ಹಾಗೂ ಮಂಡಳಿಗಳ ಆಧ್ಯಕ್ಷರ ನೇಮಕಾತಿಯ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ವಿವಿಧ ನಿಗಮ, ಮಂಡಳಿಗಳ ಆಧ್ಯಕ್ಷರ ನೇಮಕಾತಿಯ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲಾಗಿದ್ದು, ಸುಮಾರು 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಆದೇಶವನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ.
ಇನ್ನೆರಡು ದಿನದಲ್ಲಿ ಹೊಸ ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸುಮಾರು ಮೂರು ಗಂಟೆಗಳ ಕಾಲ ಮುಖ್ಯಮಂತ್ರಿ ಕಂದಾಯ ಸಚಿವ ಸಭೆ ನಡೆಸಲಾಗಿದೆ. ಒಂದೂವರೆ ವರ್ಷ ಪೂರೈಸಿರುವ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಆದೇಶವನ್ನು ವಾಪಸ್ ಪಡೆಯಲಾಗಿದ್ದು, ಹೊಸ ಅಧ್ಯಕ್ಷರ ನೇಮಕ ಮಾಡುವ ಕುರಿತು ಸುದೀರ್ಘ ಚರ್ಚೆ ಮಾಡಲಾಗಿದೆ.