Home Latest ಅನಥಾಶ್ರಮದ 27 ಮಕ್ಕಳಿಗೆ ಕೋವಿಡ್ ಪಾಸಿಟಿವ್!

ಅನಥಾಶ್ರಮದ 27 ಮಕ್ಕಳಿಗೆ ಕೋವಿಡ್ ಪಾಸಿಟಿವ್!

522
0

ಕೋಲಾರ ಬ್ರೇಕಿಂಗ್: ಅನಥಾಶ್ರಮದ 27 ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಅತ್ತಿಗಿರಿಕುಪ್ಪ ಬಳಿಯಿರುವ ಆಶ್ರಮ. ಬಜೇರಿಯಾ ಟ್ರಸ್ಟ್ ನಿಂದ ನಡೆಸುತ್ತಿರುವ ಆಶ್ರಮ ಇದಾಗಿದ್ದು ಆಶ್ರಮದಲ್ಲಿ 60 ಕ್ಕೂ ಹೆಚ್ಚು ಜನ ಮಕ್ಕಳಿದ್ದಾರೆ.

ಒಂದು ವಿದ್ಯಾರ್ಥಿನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿದ ಹಿನ್ನೆಲೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಕೋವಿಡ್ ದೃಢವಾದ ಹಿನ್ನೆಲೆಯಲ್ಲಿ, ಎಲ್ಲಾ ಮಕ್ಕಳಿಗೆ ಟೆಸ್ಟ್ ಮಾಡಲಾಗಿತ್ತು. ಇಂದು 26 ಜನ ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದೊಂದು ಆತಂಕಕಾರಿ ವಿಚಾರ ಎಂದರೂ ತಪ್ಪಾಗಲಾರದು.

ಎಲ್ಲಾ ಮಕ್ಕಳನ್ನು ಕೋಲಾರ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶ್ರಮವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕಂಟೋನ್ಮೆಂಟ್ ಮಾಡಿದ್ದಾರೆ.

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡೋ 33 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್. ಕೊರೊನಾ ಹಿನ್ನೆಲೆ 900 ಜನ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದೆ. ಈ ಪೈಕಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕಿತರನ್ನು ಹೋಂ ಕ್ವಾರಂಟೇನ್ ಮಾಡಿ ಸೋಂಕಿತರಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Previous articleಎರಡು ಬಾರಿ ಕೋರೊನಾ ನಿಯಂತ್ರಣ ಲಸಿಕೆ ಪಡೆದಿದ್ದ ‘ಜಿಲ್ಲಾಧಿಕಾರಿ’ಗಳನ್ನೂ ಬಿಡದ ಕೊರೋನಾ!
Next articleಜಾರಕಿಹೊಳಿಗೆ ಕೊರೊನಾ ಪಾಸಿಟಿವ್; ರಾಸಲೀಲೆ ಪ್ರಕರಣಕ್ಕೆ ಸಿಕ್ಕಿತು ಇನ್ನೊಂದು ಟ್ವಿಸ್ಟ್!

LEAVE A REPLY

Please enter your comment!
Please enter your name here