Home Latest ಯುವ ಕಾಂಗ್ರೆಸ್​​​ನಲ್ಲಿ ಗದ್ದಲ; ನನಗೆ ರಕ್ಷಣೆ ಕೊಡಿ’ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ.ಆರ್​​ ದೂರು

ಯುವ ಕಾಂಗ್ರೆಸ್​​​ನಲ್ಲಿ ಗದ್ದಲ; ನನಗೆ ರಕ್ಷಣೆ ಕೊಡಿ’ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ ಕೆ.ಆರ್​​ ದೂರು

363
0

ಯುವ ಕಾಂಗ್ರೆಸ್​​​ನಲ್ಲಿ ಗದ್ದಲ ಉಂಟಾಗಿದ್ದು, ಪೊಲೀಸ್​ ಠಾಣೆ ಮೆಟ್ಟಿಲೇರಿದೆ. ಕೋವಿಡ್ ವಾರ್ ರೂಂ ಸ್ಥಾಪನೆ ವಿರೋಧಿಸಿ ಎಸ್​​ಸಿ ಸಮುದಾಯದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾಗೆ, ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಭವ್ಯ ರಕ್ಷಣೆ ಕೋರಿ ನಲಪಾಡ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭವ್ಯರ ಕಂಪ್ಲೆಂಟ್ ಪ್ರತಿ ಲಭ್ಯವಾಗಿದೆ.

ನಿನ್ನೆ ಸಂಜೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಂ ನಿರ್ಮಾಣದ ಕೆಲಸದ ವೇಳೆ ಅಡ್ಡಿಪಡಿಸಿ ನಲಪಾಡ್ ಭವ್ಯಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ನಲಪಾಡ್ ಹಾಗೂ ಬೆಂಬಲಿಗರ ಬೆದರಿಕೆ, ಧಮ್ಕಿ ಹಾಗೂ ಗಲಾಟೆ ಹಿನ್ನಲೆಯಲ್ಲಿ ಭವ್ಯ ಹೈಗ್ರೌಂಡ್ಸ್ ಠಾಣೆ ಮೆಟ್ಟಿಲೇರಿದ್ದಾರೆ. ದೂರಿನಲ್ಲಿ ನಲಪಾಡ್ ಬೆದರಿಕೆ ಬಗ್ಗೆ ಸಂಪೂರ್ಣ ವಿವರ ಹಾಗೂ ಇತಿಹಾಸ ಉಲ್ಲೇಖಿಸಿದ್ದಾರೆ.

ಬಸವಕಲ್ಯಾಣ, ದೆಹಲಿಯಲ್ಲೂ ನಲಪಾಡ್ ಧಮ್ಕಿ ಹಾಕಿದ್ದಾರೆಂದು ದೂರು: ಶಾಸಕರಾದ ಹಾರಿಸ್ ರವರ ಮಗ ಮೊಹಮ್ಮದ್ ನಲಪಾಡ್, ಭಾಸ್ಕರ್, ಗೋವರ್ಧನ್, ಆಗಸ್ಟಿನ್ ಹಾಗೂ ಇತರೆ 15ಕ್ಕೂ ಹೆಚ್ಚು ಜನರ ವಿರುದ್ಧ ಭವ್ಯ ಕಂಪ್ಲೆಂಟ್ ಕೊಟ್ಟಿದ್ದಾರೆ. ಯುವ ಕಾಂಗ್ರೆಸ್ ಕಚೇರಿಗೆ ಏಕಾಏಕಿಯಾಗಿ ಬಂದು ನನ್ನನ್ನು ಗುರಿಯಾಗಿಸಿಕೊಂಡು ಬೈಯ್ದು, ಹೊಡೆಯುವ ಹಾಗೆ ಕೈ ತೋರಿಸಿದ್ದಾರೆ. ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಏಕವಚನದಲ್ಲಿ ನಿಂದಿಸಿದ್ದಾರೆ. ಆರ್ಧ ಗಂಟೆಯ ನಂತರ ಮತ್ತೆ 5 ಜನರು ಬಂದು ನಮ್ಮ ಬಾಸ್ ನಲಪಾಡ್​​ರವರ ತಂಟೆಗೆ ಬಂದರೆ ನಾವು ನಿಮ್ಮನ್ನು ಕೆಲಸ ಮಾಡಲು ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎಂದು ಭವ್ಯ ಆರೋಪ ಮಾಡಿದ್ದಾರೆ.

ಅಲ್ಲದೆ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ವೇಳೆ ತಮ್ಮ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಿರುವ ಬಗ್ಗೆಯೂ ಭವ್ಯ ದೂರಿದ್ದಾರೆ. ಬಸವ ಕಲ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರಕ್ಕೆ ಹೋದಾಗ ಸಹ ತೊಂದರೆ ಕೊಟ್ಟಿದ್ದಾರೆ. ನಲಪಾಡ್ ಹಾಗೂ ಬೆಂಬಲಿಗರು ನನ್ನ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ದೆಹಲಿಯಲ್ಲೂ‌ ಕೂಡ ನಲಪಾಡ್ ನನ್ನ ಮೇಲೆ ಕೂಗಾಡಿ, ಕೆಲ ಶಾಸಕರು ಹಾಗೂ ಕೆಪಿಸಿಸಿ ಕಾರ್ಯದರ್ಶಿಗಳಿಗೇ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದು ಮೂರು ಪುಟಗಳ ಸುದೀರ್ಘ ದೂರಿನಲ್ಲಿ ಭವ್ಯ ಉಲ್ಲೇಖಿಸಿದ್ದಾರೆ.

ಹೀಗಾಗಿ ನಲಪಾಡ್ ಹಾಗೂ ಬೆದರಿಕೆ ಹಾಕಿದ ಅವರ ಬೆಂಬಲಿಗರೆಲ್ಲರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿ ಭವ್ಯ‌ ಮನವಿ‌ ಮಾಡಿದ್ದಾರೆ. ನಲಪಾಡ್ ಹಾಗೂ ಬೆಂಬಲಿಗರು ಹಿಂಸಿಸುತ್ತಿದ್ದಾರೆ, ನನಗೆ ಏನು‌ ಮಾಡ್ತಾರೋ ಎಂಬ ಭಯವಿದೆ, ಹೀಗಾಗಿ ನನಗೆ ರಕ್ಷಣೆ ಕೊಡಿ ಎಂದು ಪೊಲೀಸರ ಮೊರೆ ಹೋಗಿದ್ದಾರೆ.

ಪೊಲೀಸರು ದಾಖಲಿಸಿಕೊಂಡಿರೋ ದೂರಿನ ಸಾರಾಂಶ ಹೀಗಿದೆ: ದೂರುದಾರರಾದ ಭವ್ಯ ಕೆ.ಆರ್.ರವರು ನೀಡಿದ ದೂರಿನ ಸಾರಾಂಶವೇನೆಂದರೆ “ನಾನು ಯುವ ಕಾಂಗ್ರೆಸ್ನ ಉಪಾಧ್ಯಕ್ಷರಾಗಿದ್ದು, ಈ ದಿನ ದಿ : 21.04.2021 ರಂದು ಮದ್ಯಾಹ್ನ 3-45 ಗಂಟೆ ಸಮಯದಲ್ಲಿ, ರಾಜ್ಯಾಧ್ಯಕ್ಷರಾದ ರಕ್ಷ ರಾಮಯ್ಯ ರವರ ನೇತೃತ್ಯದಲ್ಲಿ ಯುವ ಕಾಂಗ್ರೆಸ್ ಕಚೇರಿಯಲ್ಲಿ ಕೋವಿಡ್​​ನಿಂದ ಬಳಲುತ್ತಿರವವರಿಗೆ ಆಸ್ಮತ್ರೆ , ಔಷಧಿ , ಪ್ಲಾಸ್ಮಾ ಈ ವ್ಯವಸ್ಥೆಯನ್ನು ಮಾಡಲು ನಾನು ಮತ್ತು ಸಹೋದ್ಯೋಗಿಗಳು ವಾರ್ ರೂಮ್ ಮಾಡುತ್ತಿದ್ದಾಗ, ಶಾಸಕರಾದ ಹಾರಿಸ್ ರವರ ಮಗ ಮೊಹಮ್ಮದ್ ನಲಪಾಡ್, ಭಾಸ್ಕರ್, ಗೋವರ್ಧನ್, ಆಗಸ್ಟಿನ್ ಹಾಗೂ ಇತರೆ 15ಕ್ಕೂ ಹೆಚ್ಚು ಜನರು ಯುವ ಕಾಂಗ್ರೆಸ್ ಕಚೇರಿಗೆ ಏಕಾಏಕಿಯಾಗಿ ಬಂದು ನನ್ನನ್ನು ಗುರಿಯಾಗಿಸಿಕೊಂಡು ಬೈಯ್ದು ಹೊಡೆಯುವ ಹಾಗೆ ಕೈ ತೋರಿಸಿ ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಏಕವಚನದಲ್ಲಿ ನಿಂದಿಸಿ ಅಲ್ಲಿಂದ ಹೊರಟು ಹೋದರು.

ಆರ್ಧ ಗಂಟೆಯ ನಂತರ ಯಾರೋ 5 ಜನರು ಬಂದು ನಮ್ಮ ಬಾಸ್ ನಲಪಾಡ್ ರವರ ತಂಟೆಗೆ ಬಂದರೆ ನಾವು ನಿಮ್ಮನ್ನು ಕೆಲಸ ಮಾಡಲು ಬಿಡುವುದಿಲ್ಲ ಎಂದು ಹೇಳಿ ಹೋಗಿರುತ್ತಾರೆ. ಇದೇ ರೀತಿ ಬಸವ ಕಲ್ಯಾಣದಲ್ಲಿ ನಡೆದ ಚುನಾವಣೆ ಪ್ರಚಾರಕ್ಕೆ ಹೋದಾಗ ಸಹ ತೊಂದರೆಯನ್ನು ಕೊಟ್ಟಿರುತ್ತಾರೆ. ಆದ್ದರಿಂದ ಸದರಿಯವರುಗಳನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಿ ಸೂಕ್ತ ಬಂದೋಬಸ್ತ್ ಮಾಡಬೇಕೆಂದು ನೀಡಿದ ದೂರು ಇತ್ಯಾದಿ.

Previous articleನೈಟ್ ಕರ್ಫ್ಯೂ ಮತ್ತು ವೀಕೆಂಡ್ ಲಾಕ್ ಡೌನ್; ಆ ಸಮಯದಲ್ಲಿ ಏನಿರುತ್ತೆ? ಏನಿರುವುದಿಲ್ಲ?: ಇಲ್ಲಿದೆ ಸಂಪೂರ್ಣ ವರದಿ
Next articleಎಲ್ಲೆಡೆ ಮಹಾಮಾರಿಯದ್ದೇ ಆತಂಕ; ತತ್ತರಿಸಿದ ಜನಸಾಗರ

LEAVE A REPLY

Please enter your comment!
Please enter your name here