Crime.. ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ..!

ಅಪರಾಧ ರಾಷ್ಟ್ರೀಯ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ರಾತ್ರಿ ಪತ್ನಿಯೇ ಪತಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಆಗ್ರಾ ವಿಭಾಗದ ಮಥುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶೇ. 80 ರಷ್ಟು ಸುಟ್ಟ ಗಾಯಗಳೊಂದಿಗೆ ದೆಹಲಿಗೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಪಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುಪಿಯ ಕೋಶಿ ಕಲನ್‌ ಟೌನ್‌ನಲ್ಲಿ ಈ ಘಟನೆ ವರದಿಯಾಗಿದೆ.

ಪತಿಗೆ ಬೆಂಕಿ ಹಚ್ಚಿದ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದ್ದು, ಪತಿ ಛಮನ್ ಪ್ರಕಾಶ್‌ ತನ್ನ ಹೆಂಡತಿ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಸೋಮವಾರ ದಂಪತಿಯ ನಡುವೆ ಜಗಳವಾಗಿದೆ. ನಂತರ ರಾತ್ರಿ ಪತಿ ಮಲಗಿದ್ದ ವೇಳೆ ಪತಿಯ ಮೇಲೆ ಪೆಟ್ರೋಲ್‌ ಸುರಿದ ಮಹಿಳೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಛಮನ್‌ ಪ್ರಕಾಶ್‌ ಕೂಗಿಕೊಳ್ಳುತ್ತಿರುವುದನ್ನು ಕೇಳಿಸಿಕೊಂಡ ನೆರೆಹೊರೆಯವರು ಅವರ ಮನೆಗೆ ಹೋಗಿ ಬೆಂಕಿಯನ್ನು ನಂದಿಸಿ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ,

ದೇಹದ ತುಂಬೆಲ್ಲಾ ಭೀಕರ ಸುಟ್ಟ ಗಾಯಗಳಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ರಾಷ್ಟ್ರ ರಾಜಧಾನಿಯಲ್ಲಿ ಅವರು ಮೃತಪಟ್ಟಿದ್ದಾರೆ.  ಈ ಸಂಬಂಧ ಕೋಶಿ ಕಲನ್‌ನ ಮೀನಾ ನಗರ ಕಾಲೋನಿಯ ನಿವಾಸಿ ಮೃತ ಛಮನ್‌ ಪ್ರಕಾಶ್‌ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಹಾಗೂ, ರೇಖಾ ವಿರುದ್ಧ ಐಪಿಸಿ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಪೊಲೀಸ್‌ ಠಾಣೆಯ ಉಸ್ತುವಾರಿ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿಯೂ ಅವರು ತಿಳಿಸಿದ್ದಾರೆ.

Leave a Reply

Your email address will not be published.