
ಸಿಎಂ ಬೊಮ್ಮಾಯಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವಸ್ಥಾನದ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲಾಗಿದೆ. ಎ ಗ್ರೇಡ್ ದೇಗುಲಗಳ ಸಿಬ್ಬಂದಿಗಳಿಗೆ 6ನೇ ವೇತನ ಆಯೋಗದ ಅನ್ವಯ ಸಂಬಳ, ಭತ್ಯೆ ಸಿಗುತ್ತಿದೆ ಅಲ್ಲದೆ, ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸಲಾಗಿದೆ, ಇಲಾಖೆಯ ಅಡಿಯಲ್ಲಿ ಬರುವ ಅರ್ಚಕರು ಸಿಬ್ಬಂದಿಗಳಿಗೆ ಅನ್ವಯವಾಗಲಿದೆ.
ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನವನ್ನ ಮುಜರಾಯಿ ಇಲಾಖೆಗೆ ನೀಡಲಾಗಿತ್ತು. ಮಾನ್ಯ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾ ನವನ್ನು ನೀಡಿದ್ದು, ಒಟ್ಟಾರೆಯಾಗಿ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಲಾಗಿದ್ದು ಈ ಬಾರಿಯ ಬಜೆಟ್ನಲ್ಲಿ ಇನ್ನೂ ಹೆಚ್ಚಿನ ಅನುದಾನ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದರು.