
ಪಾದಯಾತ್ರೆಗೂ ಮುನ್ನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ
ರಾಮನಗರ: ಪಾದಯಾತ್ರೆಗೂ ಮುನ್ನ ಡಿಕೆಶಿ ಟೆಂಪಲ್ ರನ್ ಮಾಡುತ್ತಿದ್ದಾರೆ. ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬಾನಂ ದೂರಿನ ಆಂಜನೇಯ ಸ್ವಾಮಿ ಹಾಗೂ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮಾಗಡಿ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಹುಟ್ಟುಹಬ್ಬ ಹಿನ್ನೆಲೆ ಇದೇ ವೇಳೆ ದೇವಸ್ಥಾನದ ಮುಂಭಾಗ ಡಿಕೆಶಿ ಹುಟ್ಟುಹಬ್ಬ ಆಚರಿಸಿದರು.ಕೆಲವೇ ಹೊತ್ತಿನಲ್ಲಿ ಎರಡನೇ ಹಂತದ ಮೇಕೆದಾಟು ಪಾದಯಾತ್ರೆಯ ಎರಡನೇ ದಿನದ ಯಾತ್ರೆ ಆರಂಭವಾಗಲಿದೆ. ಬಿಡದಿ ಸರ್ಕಲ್ನಿಂದ ಕೆಂಗೇರಿಯವರೆಗೆ ಪಾದಯಾತ್ರೆ ನಡೆಲಿದೆ.