ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು CBI ಗೆ ಹೈಕೋರ್ಟ್ ನಿಂದ ಕಾಲಾವಕಾಶ

ಬೆಂಗಳೂರು

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ರದ್ದುಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ. ಕೇಂದ್ರೀಯ ತನಿಖಾ ದಳವು ತಮ್ಮ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕೆಂದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠ,

ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿತು. ಡಿ.ಕೆ.ಶಿವಕುಮಾರ್ ಅವರು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಅಷ್ಟೇ ಅಲ್ಲ ರಿಯಲ್ ಎಸ್ಟೇಟ್, ಶಿಕ್ಷಣ ಕೇತ್ರ ಸೇರಿದಂತೆ ಇತರ ವ್ಯವಹಾರಗಳ ಮೂಲಕವೂ ಆದಾಯದ ಮೂಲ ಹೊಂದಿದ್ದಾರೆ. ಡಿಕೆಶಿ ಕುಟುಂಬದ ಇತರ ಸದಸ್ಯರ ಆದಾಯವನ್ನೂ ಸಹ ಅವರ ಲೆಕ್ಕಕ್ಕೇ ಸೇರಿಸಲಾಗಿದೆ ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಸಿಬಿಐ ದಾಖಲು ಮಾಡಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.

Leave a Reply

Your email address will not be published.