Home District DKS ಮಗಳು ಐಶ್ವರ್ಯ ಮತ್ತು ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ನಿಶ್ಚಿತಾರ್ಥ...

DKS ಮಗಳು ಐಶ್ವರ್ಯ ಮತ್ತು ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ನಿಶ್ಚಿತಾರ್ಥ ಸಂಭ್ರಮ – ಬಿಎಸ್‍ವೈ,R.ಅಶೋಕ್ ಭಾಗಿ

504
0
SHARE

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಖಾಸಗಿ ಹೊಟೇಲೊಂದರಲ್ಲಿ ನೆರವೇರಿತು.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದೆ. ಆಯ್ದ ಗಣ್ಯರು ಹಾಗೂ ಕುಟುಂಬಸ್ಥರು, ಸ್ನೇಹಿತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಒಟ್ಟು 250 ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಆರ್.ಅಶೋಕ್ ಆಗಮಿಸಿ ಹಾರೈಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ ಕುಟುಂಬಗಳ ಆಪ್ತ ಬಂಧುಗಳು, ಸ್ನೇಹಿತರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಪಿಂಕ್ ಉಡುಗೆಯಲ್ಲಿ ಮಿಂಚುತ್ತಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸ ಹಾಗೂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಎಂಗೇಜ್ಮೆಂಟ್ ಸಡಗರ ಮನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ನಿಶ್ಚಿತಾರ್ಥ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.

ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಆಮಂತ್ರಣ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ. ನಿನ್ನೆ ರಾತ್ರಿಯೇ ಕುಟುಂಬದ ಸದಸ್ಯರು ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ.

ತಂದೆ ಸಿದ್ಧಾರ್ಥ್ ಹೆಗ್ಡೆ ನಿಧನದ ನಂತರ ಕಾಫಿ ಡೇ ಉದ್ಯಮವನ್ನು ಅಮರ್ತ್ಯ ಹೆಗ್ಡೆ ನೋಡಿಕೊಳ್ಳುತ್ತಿದ್ದು, ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ತಮ್ಮ ತಂದೆ ಸ್ಥಾಪಿಸಿರುವ ಎಂಜಿನಿಯರಿಂಗ್ ಕಾಲೇಜು ಗ್ಲೋಬಲ್ ಟೆಕ್ನಾಲಜಿ ಅಕಾಡೆಮಿಯನ್ನು ನೋಡಿಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here