
ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ ಎಂದು ಮೊಹಮ್ಮದ್ ಕೈಫ್ ಹೇಳಿದ್ಯಾರಿಗೆ ಗೊತ್ತಾ..?
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಹಾಗೂ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಮೂಲಕ ವಶಕ್ಕೆ ಪಡೆದುಕೊಂಡ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇದೀಗ ಶ್ರೀಲಂಕಾ ವಿರುದ್ಧಧ ಟಿ20 ಸರಣಿಯನ್ನು ಕೂಡ ವಶಕ್ಕೆ ಪಡೆದುಕೊಂಡಿದೆ. ಟಿ20 ಸರಣಿಯಲ್ಲಿ ಭಾರತ ತಂಡ ಮತ್ತೊಂದು ವೈಟ್ವಾಶ್ ಮಾಡುವ ಉತ್ಸಾಹದಲ್ಲಿದೆ. ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಲಂಕಾ ತಂಡ ನೀಡಿದ 184 ರನ್ಗಳ ಸವಾಲಿನ ಗುರಿಯನ್ನು ಭಾರತ ತಂಡ ಸುಲಭವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಮಧ್ಯಮ ಕ್ರಮಾಂಕದ ಆಟಗಾರರ ಅಮೋಘ ಪ್ರದರ್ಶನದಿಂದಾಗಿ ಈ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದ್ದಲ್ಲದೆ ಮತ್ತೊಂದು ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ಈ ಗೆಲುವಿನ ಬಳಿಕ ಭಾರತ ತಂಡದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟೀಮ್ ಇಂಡಿಯಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭ ದಲ್ಲಿ ಓರ್ವ ಕ್ರಿಕೆಟಿಗನ ಬಗ್ಗೆ ಮೊಹಮ್ಮದ್ ಕೈಫ್ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾ ಗುತ್ತಿದೆ ಎಂದು ಕೈಫ್ ಹೊಗಳಿದ್ದಾರೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದ ಗೆಲುವಿನ ಬಳಿಕ ಮೊಹಮ್ಮದ್ ಕೈಫ್ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಭಾರೀ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ ಎಂದಿದ್ದಾರೆ ಕೈಫ್. ರೋಹಿತ್ ಶರ್ಮಾ ತೆಗೆದುಕೊಳ್ಳುವ ನಿರ್ಧಾರಗಳು ಯಶಸ್ಸಾಗುತ್ತಿರುವ ಬಗ್ಗೆ ಈ ಮಾತುಗಳನ್ನು ಆಡಿದ್ದಾರೆ ಮೊಹಮ್ಮದ್ ಕೈಫ್.