ವರದಕ್ಷಿಣೆಗೆ ದಿನಾಲೂ ಪೀಡಿಸುತ್ತಿದ್ದ ಗಂಡ: ಪತಿಯ ವಿರುದ್ಧ ಠಾಣೆ ಮೆಟ್ಟಿಲೇರಿದ ಪತ್ನಿ

ಅಪರಾಧ ಬೆಂಗಳೂರು

ಬೆಂಗಳೂರು: ವರದಕ್ಷಿಣೆಗೆ ಪೀಡಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ದೂರು ಸಲ್ಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೈದರಾಬಾದ್‌ ಮೂಲದ 28 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಆಧಾರದ ಮೇಲೆ ಖಾಸಗಿ ಕಂಪನಿ ಉದ್ಯೋಗಿ ಸುದೀಪ್‌ ವಿರುದ್ಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆ ಆರೋಪಿ ಸುದೀಪ್‌ನನ್ನು 2021ರಲ್ಲಿ ವಿವಾಹವಾಗಿದ್ದರು. ಆತನ ಕುಟುಂಬಸ್ಥರ ಒತ್ತಾಯದ ಮೇರೆಗೆ ಕೋಟ್ಯಂತರ ರೂ. ಖರ್ಚು ಮಾಡಿ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ಧೂರಿಯಾಗಿ ಸಂತ್ರಸ್ತೆಯ ಪಾಲಕರು ವಿವಾಹ ಮಾಡಿ ಕೊಟ್ಟಿದ್ದರು. ಮದುವೆಯ ಸಂದರ್ಭದಲ್ಲಿ 55 ಲಕ್ಷ ರೂ. ಮೌಲ್ಯದ ಮಿನಿ ಕೂಪರ್‌ ಕಾರು,

200 ಕೆಜಿ ಬೆಳ್ಳಿ, 4 ಕೆ.ಜಿ. ಚಿನ್ನಾಭರಣ ವನ್ನು ಸುದೀಪ್‌ಗೆ ವರದಕ್ಷಿಣೆಯಾಗಿ ಕೊಟ್ಟಿದ್ದರು. ಮದುವೆ ಕಾರ್ಯಕ್ರಮಕ್ಕಾಗಿ ಒಟ್ಟಾರೆ 6 ಕೋಟಿ ರೂ. ಖರ್ಚು ಮಾಡಲಾಗಿತ್ತು. ಇಷ್ಟೆಲ್ಲ ಕೊಟ್ಟರೂ ತೃಪ್ತಿದಾಯಕ ನಾಗದ ಪತಿ ಸುದೀಪ್‌, ತವರು ಮನೆಯಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ಕೊಡಲು ಆರಂಭಿಸಿದ್ದ. ಸಾಲದಕ್ಕೆ ದೂರುದಾರ ಮಹಿಳೆಯ ತಂದೆಯ ಹೆಸರಿನಲ್ಲಿದ್ದ 2 ಕಂಪನಿಗಳನ್ನು ಆಕೆಯ ಹೆಸರಿಗೆ ಮಾಡಿಸಿಕೊಂಡು, ಅದರಿಂದ ಬರುವ ಲಾಭವನ್ನು ಆರೋಪಿ ಪಡೆದುಕೊಂಡಿ ದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾಳೆ. ಅದರನ್ವಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published.