ಸಮಾಜದ ತಾಯ್ತನ ಕಾಪಾಡೋಣ – ಡಾ ವಿಜಯಾ: ಬಹುರೂಪಿಯ ಕೃತಿ ಬಿಡುಗಡೆಯಲ್ಲಿ ಅಮ್ಮನ ನೆನಪು

ಬೆಂಗಳೂರು

ಬೆಂಗಳೂರು, ಜುಲೈ 3-  ‘ಪ್ರತಿಯೊಬ್ಬರೊಳಗೂ ತಾಯ್ತನವಿದ್ದರೆ ಅದು ಸಮಾಜವನ್ನು ಆರೋಗ್ಯವಾಗಿರಿಸಬಲ್ಲದು’ ಎಂದು ಖ್ಯಾತ ವಿಚಾರವಾದಿ ಡಾ ವಿಜಯಾ ಅಭಿಪ್ರಾಯಪಟ್ಟರು. ‘ಬಹುರೂಪಿ’ ಪ್ರಕಾಶನ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಿರುಚಿತ್ರ ನಿರ್ದೇಶಕ ಜಯರಾಮಾಚಾರಿ ಅವರ ಕೃತಿ ‘ನನ್ನವ್ವನ ಬಯೋಗ್ರಫಿ’ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ತಾಯ್ತನ ಎನ್ನುವುದು ಕಳೆದುಹೋಗುತ್ತಿರುವ ಕಾರಣಕ್ಕಾಗಿಯೇ ಸಮಾಜದಲ್ಲಿ ಬಿಕ್ಕಟ್ಟುಗಳು ಹೆಚ್ಚುತ್ತಿವೆ. ಒಂದು ತಾಯ್ತನದ ಗುಣ ಏನು ಎನ್ನುವುದನ್ನು ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ಒಬ್ಬ ತಾಯಿ ತನ್ನನ್ನು ಕಷ್ಟಕ್ಕೆ ಒಡ್ಡಿಕೊಂಡೇ ಕುಟುಂಬದ ಸ್ವಾಸ್ಥ್ಯವನ್ನು ಕಾಪಾಡಲು ಮುಖ್ಯ ಕಾರಣಳಾಗುತ್ತಾಳೆ. ಅಂತಹ ತಾಯ್ತನವನ್ನು ಕಾಪಾಡೋಣ ಎಂದರು.

Leave a Reply

Your email address will not be published.