
ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಡಿಕ್ಕಿ ಹೊಡೆದ ಆಂಬುಲೆನ್ಸ್..!
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ನಗರದ ಶಿರಾ ಗೇಟ್ ಬಳಿ ನಡೆದಿದೆ. ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಆಂಬ್ಯುಲೆನ್ಸ್ ಚಾಲಕನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರಿದಾದ ರಸ್ತೆಯೇ ಅಪ ಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.