
ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್..! ಭೀಕರ Video ನೋಡಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಓರ್ವ ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಇಂದು ಸಂಜೆ 4 ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ.
ಅಂಬುಲೆನ್ಸ್ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಆಂಬ್ಯುಲೆನ್ಸ್ ಟೋಲ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಟೋಲ್ ಗೇಟ್ ನಲ್ಲಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.