ಮಾತಿಗೆ ತಪ್ಪದ ಮಗ ಎಂದರೆ ಅದು ಬಿ ಎಸ್ ಯಡಿಯೂರಪ್ಪ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜಕೀಯ

ಬೆಂಗಳೂರು: ಮಾತಿಗೆ ತಪ್ಪದ ಮಗ ಎಂದರೆ ಅದು ಬಿ ಎಸ್ ಯಡಿಯೂರಪ್ಪ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ,  ಬಿಎಸ್​​ವೈ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಉಚಿತ ವಿದ್ಯುತ್ ನೀಡಿದವರು. ನೀರಾವರಿ, ಸಂಧ್ಯಾ ಸುರಕ್ಷಾ ಯೋಜನೆ ಕೊಟ್ಟಿದ್ದಾರೆ. ಅವರ ಮಾರ್ಗದರ್ಶನ ಸದಾ ಅವಶ್ಯಕ. ಅವರ ಕಾರ್ಯಕ್ರಮ ನಮಗೆ ಶ್ರೀರಕ್ಷೆ. ಅವರ ಮಾರ್ಗದರ್ಶನದಲ್ಲೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Leave a Reply

Your email address will not be published.