ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಬಿಎಸ್ ವೈ: ಕಾವೇರಿ ನಿವಾಸದಲ್ಲಿ ಉಚಿತ ಟ್ರ್ಯಾಕ್ಟರ್ ವಿತರಣೆ

ಬೆಂಗಳೂರು

ಬೆಂಗಳೂರು :ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರೈತರಿಗೆ ಟ್ರ್ಯಾಕ್ಟರ್ ಗಳನ್ನು ವಿತರಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಉಚಿತ ಟ್ರ್ಯಾಕ್ಟರ್ ವಿತರಣೆ ಮಾಡಿದ್ದು, ವಿಭಿನ್ನವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೇ ಈ ಬಾರಿಯೂ ಕೂಡ ಕೋವಿಡ್ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದು, ಈ ಸಂಬಂಧ ಬಿ ಎಸ್ ಯಡಿಯೂರಪ್ಪ ಅವರೇ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೂ ಹುಟ್ಟುಹಬ್ಬದ ಪ್ರಯುಕ್ತ ಇಂದು ಸಂಜಯನಗರದ ರಾಮಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

Leave a Reply

Your email address will not be published.