ತುರ್ತು ನಿರ್ವಹಣಾ ಕೆಲಸ ಕೈಗೊಂಡ ಹಿನ್ನೆಲೆ: ಪಣತ್ತೂರು ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು

ಬೆಂಗಳೂರು: ಪಣತ್ತೂರು ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹದೇವಪುರ ವಲಯ ವ್ಯಾಪ್ತಿಯ ಪಣತ್ತೂರು ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಇಂದಿನಿಂದ ನಾಲ್ಕು ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಮಹದೇವಪುರ ವಲಯದ ಕಾರ್ಯಪಾಲಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನೂ ಪಣತ್ತೂರು ಚಿತಾಗಾರಕ್ಕೆ ಪ್ರಸ್ತುತ ಸರಾಸರಿ 4 ರಿಂದ 5 ಶವಗಳು ಬರುತ್ತಿವೆ. ಈ ಚಿತಾಗಾರದಲ್ಲಿ ಈ ಹಿಂದೆ ನಿರಂತರವಾಗಿ ಬಿಡುವಿಲ್ಲದೆ ಕಾರ್ಯನಿರ್ವಹಿಸಿದ್ದರಿಂದ ಚಿತಾಗಾರದ Chiminy Pipeline ಹಾಳಾಗಿದ್ದು, ಈ ಹಿನ್ನೆಲೆ ಚಿತಾಗಾರವನ್ನು ಸುಸ್ಥಿತಿಯಲ್ಲಿಡುವ ಸಂಬಂಧ ಈ ಕೆಲಸಗಳನ್ನು ಕೈಗೊಳ್ಳಲೇಬೇಕಾಗಿದೆ. ಈ ಹಿನ್ನೆಲೆ ದುರಸ್ತಿ ಕಾರ್ಯ ಮುಗಿಯುವ ತನಕ ಚಿತಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published.