ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ. ಇನ್ನೂ ರಾಜ್ಯದ ಕರಾವಳಿ ತೀರದಲ್ಲಿ ಮುಂದಿನ ಎರಡು ದಿನ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ಕೀ.ಮೀ.ನಿಂದ 55 ಕಿ.ಮೀ.ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.

Leave a Reply

Your email address will not be published.