ಫೆಬ್ರವರಿ 27ಕ್ಕೆ ಪಾದಯಾತ್ರೆ ಆರಂಭಿಸಲು ತೀರ್ಮಾನಿಸಲಾಗಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಫೆಬ್ರವರಿ 27ಕ್ಕೆ ಪಾದಯಾತ್ರೆ ಆರಂಭಿಸಲು ತೀರ್ಮಾನಿಸಲಾಗಿದೆ. ಈಗ ರಾಮನಗರದಿಂದ ಬೆಂಗಳೂರಿನವರೆಗೂ ಉಳಿದ 6 ದಿನಗಳ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದೆ. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಜನವರಿ 9ರಂದು ಪಾದಯಾತ್ರೆ ಆರಂಭಿಸಿತ್ತು. ಈ ಪಾದಯಾತ್ರೆ ರಾಮನಗರದ ಮಾರ್ಗವಾಗಿ ಬೆಂಗಳೂರಿಗೆ ತಲುಪಬೇಕಿತ್ತು. ಆದರೆ, ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆ ಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಆದೇ‌ಶದ ಮೇರೆಗೆ ಸರ್ಕಾರ ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಕಾಂಗ್ರೆಸ್‌ ಪಾದಯಾ ತ್ರೆಯನ್ನು ಮತ್ತೆ ಮುಂದುವರಿಸಲು ತೀರ್ಮಾನಿಸಿದೆ.

Leave a Reply

Your email address will not be published.