
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ನಾಳೆ ಸಿಎಂ ಬೊಮ್ಮಾಯಿರಿಂದ ಉದ್ಘಾಟನೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಾಳೆಯಿಂದ ಏಳು ದಿನಗಳ ಕಾಲ ನಡೆಯಲಿದೆ. ಸಿಎಂ ಬೊಮ್ಮಾಯಿ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್, ಆಹಾರ, ನಾಗರೀಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ತೋಟಗಾರಿಕೆ ಸಚಿವ ಮುನಿರತ್ನ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಕೃಷ್ಣಪ್ಪ, ಎಂ.ಸತೀಶ್ ರೆಡ್ಡಿ, ಬಿ.ಕೆ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿದ್ದಾರೆ.