ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಉಳಿಯಿತು 11 ಜನರ ಪ್ರಾಣ..!

ಬೆಂಗಳೂರು

ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆಯಿಂದ 11 ಮಂದಿ ಸಾವಿನ ದವಡೆಯಿಂದ ಬಚಾವ್ ಆಗಿರುವ ಘಟನೆ ಬೆಂಗಳೂರಿ ನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಎಸ್.ಜಿ ಪಾಳ್ಯದಲ್ಲಿ ಮೋಹನ್ ರಾವ್ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಸಹಾಯಕ್ಕಾಗಿ ಅಗ್ನಿಶಾಮಕದಳಕ್ಕೆ ಕರೆ ಬಂದಿತ್ತು. ಕರೆ ಬಂದ ಕೂಡಲೇ ಘಟನಾ ಸ್ಥಳಕ್ಕೆ ಜಯನಗರ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅವಘಡದ ವೇಳೆ ಕಟ್ಟಡದಲ್ಲಿ ವೃದ್ಧರು, ಮಹಿಳೆಯರು, ಮಕ್ಕಳು ಸೇರಿ 11 ಮಂದಿ ಇದ್ದರು ಎಂದು ತಿಳಿದು ಬಂದಿದೆ. ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದರಿಂದ ಹಲವಾರು ಮಂದಿ ಸಾವಿನ ದವಡೆಯಿಂದ ಪಾ ರಾಗಿದ್ದಾರೆ. ಸುದ್ದಗುಂಟೆಪಾಳ್ಯ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.