ಪ್ರಪ್ರಥಮ ಬಾರಿಗೆ ಕೈಮಗ್ಗ ಮೇಳ: ನೇಕಾರರಿಗೆ ರಾಜ್ಯ ಸರ್ಕಾರದ ಬೆಂಬಲ

ಬೆಂಗಳೂರು

ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಪ್ರಪ್ರಥಮ ಬಾರಿಗೆ ಕೈಮಗ್ಗ ಮೇಳ ಆಯೋಜನೆ ಮಾಡಿದೆ. ಶುಕ್ರವಾರದಿಂದ ಭಾನುವಾರದವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜನೆಗೊಂಡಿದೆ. ಮಹಾಮಾರಿ ಕೋವಿಡ್​ನಿಂದ ನೇಕಾರರ ಜೀವನ‌ ತತ್ತರಿಸಿ ಹೋಗಿರುವ ಕಾರಣ ನೇಕಾರರನ್ನು ಬೆಂಬಲಿಸಿ‌ ರಾಜ್ಯ ಕೈಮಗ್ಗ-ಜವಳಿ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.

ಈಗ ಸರ್ಕಾರ ಕೋವಿಡ್ ನಂತರ ರಾಜ್ಯದಲ್ಲಿ ಮೊದಲ ಬಾರಿಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದೆ. ಇಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ನೇಕಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಸಹ ಆಯೋಜನೆಗೊಂಡಿದ್ದು, ಆಗಸ್ಟ್ .7ರಂದು ಬೆಳಗ್ಗೆ 11.30ಕ್ಕೆ ಕೈಮಗ್ಗ ಮತ್ತು ಜವಳಿ, ಸಕ್ಕರೆ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಉದ್ಘಾಟಿಸಲಿದ್ದಾರೆ.

Leave a Reply

Your email address will not be published.