
ಮೀನುಗಾರರ ಮನೆ ನಿರ್ಮಾಣಕ್ಕೆ ಬಿಡುಗಡೆಯಾಗದ ಅನುದಾನ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ
ಬೆಂಗಳೂರು: ಮೀನು ಗಾರರ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಯು.ಟಿ. ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಎಸ್. ಅಂಗಾರ ಪರವಾಗಿ ಸಚಿವೆ ಶಶಿಕಲಾ ಜೊಲ್ಲೆ ಉತ್ತರ ನೀಡಿದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಕಾಗೇರಿ, ಫಲಾನುಭವಿಗಳನ್ನು ಆಯ್ಕೆ ಮಾಡಿ ವರ್ಷಗಳೇ ಕಳೆದರೂ ಮನೆ ಮಂಜೂರು ಮಾಡದಿರುವುದು ಸರಿಯಾದ ಕ್ರಮವಲ್ಲ. ವಿಷಯ ಗಂಭೀರವಾಗಿ ಪರಿಗಣಿಸಿ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರಕ್ಕೆ ತಾಕೀತು ಮಾಡಿದರು.