ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳನ್ನು ಇರಿಸಿರುವುದನ್ನು ಬಜೆಟ್ ನಲ್ಲಿ ಕಾಣಬಹುದು: ಸಚಿವ ಎಂಟಿಬಿ ನಾಗರಾಜ್

ರಾಜಕೀಯ

ಬೆಂಗಳೂರು: ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಬಜೆಟ್ ಇದಾಗಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಕೋವಿಡ್ ನಂತರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ರೂಪಿಸಿರುವ ಬಜೆಟ್ ರಾಜ್ಯದ ಪ್ರಗತಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಮುಖ್ಯಮಂತ್ರಿಗಳು ರಾಜ್ಯದ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳನ್ನು ಇರಿಸಿರುವುದನ್ನು ಬಜೆಟ್ ನಲ್ಲಿ ಕಾಣಬಹುದು. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಒಂದು ಸಾವಿರ ಕೋಟಿ ರೂಪಾ ಯಿಗಳ ಅನುದಾನ ಒದಗಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿಗಳು ಮಾಡಿದ್ದು, ಇದರಿಂದ ಶೀಘ್ರದಲ್ಲೇ ಯೋಜನೆ ಆರಂಭ ವಾಗುವ ಆಶಾಭಾವನೆ ಮೂಡಿದೆ ಎಂದು ಹೇಳಿದರು.

Leave a Reply

Your email address will not be published.