ಪ್ರತಿಭಟನಾಕಾರರಿಗೆ ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಸಿಕ್ತು ಲಕ್ಷ ಲಕ್ಷ ಹಣ

ರಾಷ್ಟ್ರೀಯ

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಇದರಿಂದ ರೊಚ್ಚಿಗೆದ್ದ ಜನರು ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ನಿವಾಸದಲ್ಲಿ ದೊಡ್ಡ ಮೊತ್ತದ ಹಣವನ್ನು ಪತ್ತೆ ಹಚ್ಚಿದ್ದಾರೆ.

ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಲಕ್ಷಾಂತರ ರೂ. ಹಣವನ್ನು ಪತ್ತೆ ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಎಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 1.78 ಲಕ್ಷ ರೂ. (17.8 ಮಿಲಿಯನ್‌ ಶ್ರೀಲಂಕನ್‌ ರುಪಿ) ಪ್ರತಿಭಟನಾಕಾರರಿಗೆ ಸಿಕ್ಕಿದ್ದು, ಅದನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಜಪಕ್ಸೆ ಮನೆತನದ ಆಡಳಿತ ವಿರೋಧಿಸಿ ಶ್ರೀಲಂಕಾ ಜನತೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶಿತ ಜನಸಮೂಹ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ಲಗ್ಗೆಯಿಟ್ಟು ದಾಂಧಲೆ ಸೃಷ್ಟಿಸಿದರು. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿದರು. ಅಡುಗೆ ಕೋಣೆಯಲ್ಲಿನ ತಿಂಡಿ-ತಿನಿಸು ತಿಂದರು. ಹಾಸಿಗೆಯಲ್ಲಿ ಬಿದ್ದು ಹೊರಳಾಡಿದರು.

Leave a Reply

Your email address will not be published.