ರಾಜ್ಯದಲ್ಲೇ ಮೊದಲ ಬಾರಿಗೆ ಆಟೋಲೋಗಸ್ ಕಾರ್ಟಿಲೆಜ್ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು

ಬೆಂಗಳೂರು: ಫುಟ್ ಬಾಲ್ ಆಟದಲ್ಲಿ ಪಾದದ ಕಾರ್ಟಿಲೇಜ್ ಗೆ ಹಾನಿಮಾಡಿಕೊಂಡಿದ್ದ ಕ್ರೀಡಾಪುಟುವಿಗೆ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಆಟೋಲೋಗಸ್ ಕಾರ್ಟಿಲೇಜ್ ಕಸಿ ಶಸ್ತ್ರಚಿಕಿತ್ಸೆಯನ್ನ ಜಯನಗರದ ಯುನೈಟೆಡ್ ಆಸ್ಪತ್ರೆಯ ವೈದ್ಯರು ನೆರವೇರಿಸಿದ್ದಾರೆ.

ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ ನಡೆಸಿದ ಈ ಅತ್ಯಾಧುನಿಕ ತಂತ್ರಜ್ಞಾನದ ಶಸ್ತ್ರಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ವೈದ್ಯರು ವಿವರಿಸಿದರು. ಇತ್ತೀಚಿಗೆ ಅಜಯ್ ಎಂಬ ಯುವ ಫುಟ್ಬಾಲ್ ಆಟಗಾರ ಫುಟ್ ಬಾಲ್ ಪಂದ್ಯವೊಂದರಲ್ಲಿ ತನ್ನ ಪಾದಕ್ಕೆ ಗಾಯ ಮಾಡಿಕೊಂಡಿದ್ದರು.

ಕೀಲುಗಳ ಕಾರ್ಟಿಲೆಜ್ ಸಮಸ್ಯೆಯನ್ನು ಸಾಮಾನ್ಯವಾಗಿ ಯಾವುದೇ ಶಸ್ತ್ರಚಿಕಿತ್ಸೆಗಳಿಲ್ಲದೆ ನಿವಾರಿಸಲಾಗುತ್ತದೆ. ದೀರ್ಘಕಾಲದ ವಿಶ್ರಾಂತಿ ತೆಗೆದುಕೊಳ್ಳುವುದು ಸಾಮಾನ್ಯವಾಗಿ ಭಾರತದಲ್ಲಿ ರೂಢಿಯಲ್ಲಿದೆ.

ಆದರೆ ಇದು ಕ್ರೀಡಾಪಟುಗಳು ತಮ್ಮ ಚಟುವಟಿಕೆಗಳಲ್ಲಿ ಮುಂದುವರಿಯುವುದನ್ನು ತಡೆಯುತ್ತದೆ ಹಾಗೂ ನಿಧಾನವಾಗಿ ಚೇತರಿಸಿಕೊಳ್ಳುವ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮರಳಿ ಪಡೆದುಕೊಳ್ಳಲು ಬಹಳಷ್ಟು ಸಮಯಾವಕಾಶ ಬೇಡುತ್ತದೆ ಎಂದು ವೈಧ್ಯರು ತಿಳಿಸಿದರು.

Leave a Reply

Your email address will not be published.