ಟ್ರಾಫಿಕ್ ನಿರ್ವಹಣೆಗಾಗಿ ಸಂಚಾರ ಪೊಲೀಸರೊಂದಿಗೆ ಕೈಜೋಡಿಸಿದ ಗೂಗಲ್

ಬೆಂಗಳೂರು

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಗೂಗಲ್​ ನೊಂದಿಗೆ ಕೈಜೋಡಿಸಿದ್ದಾರೆ. ಇನ್ನುಮುಂದೆ ವಾಹನ ಸವಾರರಿಗೆ ಗೂಗಲ್‌ ಮ್ಯಾಪ್‌ ಮೂಲಕವೇ ಸ್ಪೀಡ್‌ ಲಿಮಿಟ್‌ ತಿಳಿಯಲಿದೆ. ಹಾಗೆಯೇ ವಾಹನ ಸಂಚಾರ ದಟ್ಟಣೆಯಿರುವ ರಸ್ತೆಗಳು, ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧವಿರುವ ರಸ್ತೆಗಳ ಮಾಹಿತಿಯೂ ಇದರಲ್ಲಿ ಸಿಗಲಿದೆ. ವಾಹನ ಸಂಚಾರ ದಟ್ಟಣೆ ಇರುವುದರ ಕುರಿತು ಮುಂಚಿತವಾಗಿಯೇ ವಾಹನ ಸವಾರರಿಗೆ ತಿಳಿಸಲಿದೆ. ಇದರಿಂದ ವಾಹನ ಸವಾರರು ಬೇರೆ ರಸ್ತೆಗಳ ಮೂಲಕ ಸಂಚರಿಸಬಹುದು. ಇದು ದಟ್ಟಣೆ, ಕಾಯುವ ಸಮಯ, ಇಂಧನ ಬಳಕೆ, ರಸ್ತೆಗಳ ಬಗ್ಗೆ ಮಾಹಿತಿ ನೀಡಲಿದೆ.

ಯೋಜನೆಯ ಭಾಗವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ನೂರಾರು ಯೋಜನೆಗಳನ್ನು ಗೂಗಲ್‌ನೊಂದಿಗೆ ಹಂಚಿಕೊಂಡಿದ್ದಾರೆ. ಈ ಪಾಲುದಾರಿಕೆ ಉತ್ತಮವಾಗಿದ್ದು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಗೂಗಲ್‌ ಸಂಸ್ಥೆಯೊಂದಿಗಿನ ಈ ಒಪ್ಪಂದವು ಆಧುನಿಕ ತಂತ್ರಜ್ಞಾನದ ನೆರವಿನಿಂದ ವಾಹನ ಸಂಚಾರ ನಿರ್ವಹಣೆ ಜತೆಗೆ ವಾಹನ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದೇವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published.