ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಮಾಜಿ ಬಿಬಿಎಂಪಿ ಸದಸ್ಯ ಮಂಜುನಾಥ್ ಬಿಜೆಪಿ ಸೇರ್ಪಡೆ

ಬೆಂಗಳೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕಟ್ಟಾ ಅನುಯಾಯಿಯಾಗಿದ್ದ ಮಂಜುನಾಥ್ ಅವರು ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ನಗರ ಘಟಕದ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ್ ಅವರಿಗೆ ಪಕ್ಷದ ಬಾವುಟವನ್ನು ಹಸ್ತಾಂತರಿಸಿ, ಸಚಿವರು ಪಕ್ಷಕ್ಕೆಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಬಿಜೆಪಿ‌ ನಗರ ಜಿಲ್ಲಾಧ್ಯಕ್ಷ ನಾರಾಯಣಗೌಡ, ಉತ್ತರ ಜಿಲ್ಲೆ ಕಾರ್ಯದರ್ಶಿ ಗಂಗಹನುಮಯ್ಯ, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕಾವೇರಿ ಕೇದಾರನಾಥ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

 

Leave a Reply

Your email address will not be published.