ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿಗೆ ಸೇರ್ಪಡೆ

ರಾಜಕೀಯ

ಬೆಂಗಳೂರು: ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದೇವನಹಳ್ಳಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವ ಡಾ. ಕೆ.‌ ಸುಧಾಕರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಸಂಸದ ಪಿ. ಸಿ. ಮೋಹನ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published.