
ಅಡವಿಟ್ಟ ಚಿನ್ನವನ್ನು ಬಿಡಿಸಿ ಕೊಡುವುದಾಗಿ ನಂಬಿಸಿ ವಂಚನೆ: ಆರೋಪಿ ಬಂಧನ
ಬೆಂಗಳೂರು: ಅಡವಿಟ್ಟ ಚಿನ್ನವನ್ನು ಬಿಡಿಸಿ ಕೊಡುವುದಾಗಿ ನಂಬಿಸಿ ವಂಚನೆ ಎಸಗಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀ ಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಡುಗು ಡಿಯ ನಿವಾಸಿ ಇಲಿಯಾಸ್ ಪಾಷ ಬಂಧಿತ ಆರೋಪಿಯಾಗಿದ್ದು, ಆರೋಪಿ ಅಡವಿಟ್ಟ ಚಿನ್ನವನ್ನು ಬಿಡಿಸಿ ಕೊಡುವುದಾಗಿ ನಂಬಿಸಿ ಹಣ ದೋಚಿ ಪರಾರಿಯಾಗುತ್ತಿದ್ದ. ಅಷ್ಟೇ ಅಲ್ಲದೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯ ಗಮನ ಬೇರೆಡೆ ಸೆಳೆದು ಹಣ ದೋಚು ತ್ತಿದ್ದ ಎನ್ನಲಾಗಿದೆ. ಸದ್ಯ ಇದೀಗ ಈ ಆರೋಪಿ ಅಂದರ್ ಆಗಿದ್ದು, ಕಡಿಮೆ ದರದಲ್ಲಿ ಚಿನ್ನ ಬಿಡಿಸಿ ಕೊಡುವುದಾಗಿ ಜಾಹಿರಾತು ನೀಡಿರು ವುದ್ದನ್ನು ಯಾರು ಕೂಡಾ ನಂಬಿ ಮೋಸ ಹೋಗದಂತೆ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.