Home District ‘ಬದುಕು’ ಮುಗಿಸಿದ ಗೀತಾ ನಾಗಭೂಷಣ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಸಾಹಿತಿ

‘ಬದುಕು’ ಮುಗಿಸಿದ ಗೀತಾ ನಾಗಭೂಷಣ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಸಾಹಿತಿ

152
0
SHARE

ಕಲಬುರಗಿ:  ನಿನ್ನೆ ಹಿರಿಯ ಕಾದಂಬರಿಗಾರ್ತಿ, ಸಾಹಿತಿ ಗೀತಾ ನಾಗಭೂಷಣ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಇಲ್ಲಿನ ಸ್ವಸ್ತಿಕ್​ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ ಅವರಿಗೆ ಭಾನುವಾರ ಸಂಜೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಲಬುರಗಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಮಾರ್ಚ್ 25, 1942 ರಂದು ಜನಿಸಿದ್ದ ಗೀತಾ ನಾಗಭೂಷಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಗಾದ ಹೆಸರು ಮಾಡಿದ್ದಾರೆ. ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆಯಾಗಿದ್ದರು. 2010 ರಲ್ಲಿ ಗದಗ ನಗರದಲ್ಲಿ ನಡೆದ 76ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಸಹ ವಹಿಸಿದ್ದರು.

ಗೀತಾ ನಾಗಭೂಷಣ ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಎಂಬ ಖ್ಯಾತಿ ಪಡೆದವರಾಗಿದ್ದಾರೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದ್ದಾಗಿದೆ.

ಇವರ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಸಾಹಿತ್ಯ ಸಾಧನೆಯಲ್ಲಿ ಹತ್ತಾರು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಗೀತಾ ನಾಗಭೂಷಣ ನಗರದ ನಗರೇಶ್ವರ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದರು.ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿರುವ ಗೀತಾ ನಾಗಭೂಷಣ್ ಅವರ ಅಂತ್ಯಕ್ರಿಯೆ ಇಂದು ಕಲಬುರಗಿಯಲ್ಲಿ ನಡೆಯಲಿದೆ.

 

LEAVE A REPLY

Please enter your comment!
Please enter your name here