ಸ್ನಾನ ಮಾಡಲು ಹೋಗಿ ಕಾವೇರಿ ನದಿ ನೀರಲ್ಲಿ ಕೊಚ್ಚಿ ಹೋದ ಯುವಕ..!

ಜಿಲ್ಲೆ

ಮಂಡ್ಯ: ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಬಳಿಯ ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಯಲಂಕ ನಿವಾಸಿ ಅಶೋಕ್(26) ನೀರಿನಲ್ಲಿ ಕೊಚ್ಚಿ ಹೋದ ಯುವಕ. ಕುಟುಂಬಸ್ಥರ ಜೊತೆ ಪ್ರವಾಸಕ್ಕೆ ತೆರಳಿದ್ದ ವೇಳೆ ಅಶೋಕ್ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಿದ್ದಾನೆ. ಸದ್ಯ ಅಶೋಕ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆಯಷ್ಟೇ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ನಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ ನದಿ ನೋಡಲು ಹೋದ ಯುವಕ ಏಕಾಏಕಿ ನದಿಗೆ ಜಿಗಿದಿದ್ದ. ಇದೀಗ ಮತ್ತೊಬ್ಬ ಯುವಕ ನೀರುಪಾಲಾಗಿದ್ದಾನೆ.

 

Leave a Reply

Your email address will not be published.