ಅದೃಷ್ಟ ಅಂದ್ರೆ ಇದು: ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಪಾಲಿಕೆಯ ಮೇಯರ್..!

ರಾಷ್ಟ್ರೀಯ

ಚೆನ್ನೈ: ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದೀಗ ತಮಿಳುನಾಡಿನ ಕುಂಭಕೋಣಂ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. 47 ವರ್ಷದ ಶರವಣನ್ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. 48 ವಾರ್ಡ್‍ ಗಳಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 42 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಇದೀಗ ಮೇಯರ್ ಆಗಿ ಶರವಣನ್ ಆಯ್ಕೆಯಾಗಿದ್ದಾರೆ. ಕಾಂಗ್ರೆ ಸ್ ಪಕ್ಷಕ್ಕೆ ನಿಷ್ಠರಾಗಿರುವ ಶರವಣನ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕ ಳೊಂದಿಗೆ ವಾಸವಾಗಿದ್ದಾರೆ. ಆರನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಇವರು,

ಸ್ಥಳೀಯ ಜನರ ಸಮಸ್ಯೆ ಬಗೆಹರಿಸುವಲ್ಲಿ ಒಂದು ಹೆಜ್ಜೆ ಮುಂದೆ ಇದ್ದಾರೆ. ಮೇಯರ್ ಆಗಿ ಆಯ್ಕೆಯಾದ ಬಳಿಕ ಶರವಣನ್ ಪ್ರಮಾಣ ವಚನ ಸ್ವೀಕಾರ ಮಾಡಲು ಆಟೋದಲ್ಲಿ ಪಾಲಿಕೆಗೆ ಆಗಮಿಸಿ ಗಮನ ಸೆಳೆದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ದಾಖಲಿಸಿರುವ ಸರವಣನ್ ಪಕ್ಷದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ ಎಸ್ ಅಲ್‍ಗಿರಿ ಇವರ ಹೆಸರನ್ನ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಶರವಣನ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ.

Leave a Reply

Your email address will not be published.