ಉತ್ತಮ ಮಳೆ ಹಿನ್ನೆಲೆ: ಕೋಲಾರ ಯರಗೋಳ್ ಡ್ಯಾಂಗೆ ಬಾಗಿನ ಸಮರ್ಪಣೆ ಮಾಡಿದ ಸಚಿವರು

ಜಿಲ್ಲೆ

ಕೋಲಾರ :ಕೋಲಾರ ಜಿಲ್ಲೆಯಲ್ಲಿ ಇತ್ತಿಚೆಗೆ ಸುರಿಯುತ್ತಿರುವ ಸತತ  ಮಳೆಯಿಂದ  ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್​ ಗ್ರಾಮದ ಬಳಿ ನಿರ್ಮಾಣ ಮಾಡಲಾಗಿದ್ದ ಯರಗೋಳ್​ ಡ್ಯಾಂ ತುಂಬಿ ಕೋಡಿ ಹರಿಯುತ್ತಿದೆ.ಡ್ಯಾಂ ನಿರ್ಮಾಣ ಕಾಮಗಾರಿ ಇತ್ತೀಚೆಗಷ್ಟೇ ಪೂರ್ಣ ಗೊಂಡಿತ್ತು, ಡ್ಯಾಂ ನಿರ್ಮಾಣ ಮಾಡಿದ ನಂತರ ಇದೇ ಮೊದಲ ಬಾರಿಗೆ ತುಂಬಿ ಹರಿಯುತ್ತಿರುವ ಹಿನ್ನೆಲೆ ಕೋಲಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ನಗರಾಭಿವೃದ್ದಿ ಸಚಿವರು, ಶಾಸಕರು, ಸಂಸದರು ತುಂಬಿ ಹರಿಯುತ್ತಿರುವ ಯರಗೋಳ್​ ಡ್ಯಾಂಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್​, ಸಂಸದ ಮುನಿಸ್ವಾಮಿ ಸೇರಿದಂತೆ ಜಿಲ್ಲಾಧಿಕಾರಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇನ್ನು ಸ್ವತಂತ್ರ್ಯಾ ನಂತರ ಕೋಲಾರ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾದ ಮೊದಲ ಡ್ಯಾಂ ಎಂಬ ಹೆಗ್ಗಳಿಕೆ ಹೊಂದಿರುವ ಈ ಡ್ಯಾಂ 315 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಬಂಗಾರಪೇಟೆ, ಮಾಲೂರು, ಕೋಲಾರ ನಗರಗಳಿಗೆ ಹಾಗೂ 45 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ.ಇನ್ನು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿದ ಧಾರಾಕಾರ ಮಳೆಗೆ ಯರಗೋಳ ಜಲಾಶಯವು ತುಂಬಿದ್ದು, ಇದರ ನೀರನ್ನು 3 ತಾಲ್ಲೂಕುಗಳಿಗೆ ಹರಿಸುವುದನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಮುನಿರತ್ನ ತಿಳಿಸಿದ್ರು.

Leave a Reply

Your email address will not be published.