ಮೃತನ ಕುಟುಂಬದವರಿಗೆ ಸರ್ಕಾರ ನ್ಯಾಯ ಒದಗಿಸಬೇಕು: ಎಚ್.ಕೆ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು

ಬೆಂಗಳೂರು: ಶಿವಮೊಗ್ಗ ಹಿಂದೂಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಪ್ರ ತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಅರಗ ಜ್ಞಾ ನೇಂದ್ರ, ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಆದರೂ ಇಂತಹ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಅಮಾಯಕ ಯುವಕನ ಹತ್ಯೆಯಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಪತ್ತೆಹಚ್ಚಬೇಕು. ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಘಟನೆ ಬಗ್ಗೆ ನಮ್ಮ ಪಕ್ಷದ್ದು ಸಾಂತ್ವಾನವಿದೆ. ರಾಜ್ಯದಲ್ಲಿ ಬೇರೆ ಬೇರೆ ಸಮಸ್ಯೆಗಳು ಎದುರಾಗಿದ್ದು, ಈ ಘಟನೆ ಕೂಡ ರಾಜಕೀಯ ತಿರುವು ಪಡೆಯಬಾರದು. ಸರ್ಕಾರ ಮೃತನ ಕುಟುಂಬದವರಿಗೆ ನ್ಯಾಯ ಒದಗಿಸಬೇಕೆಂದು ಎಚ್ ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Leave a Reply

Your email address will not be published.