ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ: ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ 19 ವರ್ಷದ ಕಾರ್ಮಿಕ

ಅಂತರಾಷ್ಟ್ರೀಯ

ಬಂಡಿಪೊರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಮಧ್ಯರಾತ್ರಿಯ ವೇಳೆ ಬಂಡಿಪೊರಾ ಜಿಲ್ಲೆಯಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮ್ರೇಜ್ ಎಂಬುವವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ದಾಳಿಯಲ್ಲಿ ಗಾಯಗೊಂಡಿದ್ದ ಅಮ್ರೇಜ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ತೀವ್ರ ರಕ್ತಸ್ತ್ರಾವದಿಂದ ಮೃತಪಟ್ಟಿದ್ದಾರೆ.

ಇಂದು ಬೆಳಿಗ್ಗೆ 12.20ರ ಸುಮಾರಿಗೆ ನನ್ನ ಸಹೋದರ ನನ್ನನ್ನು ಎಬ್ಬಿಸಿದನು. ಅಷ್ಟರಲ್ಲಾಗಲೇ ಗುಂಡಿನ ದಾಳಿ ಪ್ರಾರಂಭವಾಗಿತ್ತು. ಅವನು ಎಲ್ಲೂ ಕಾಣಲಿಲ್ಲ. ಆಗ ಅವನು ಶೌಚಾಲಯಕ್ಕೆ ಹೋಗಿದ್ದಾನೆಂದು ನಾವು ಭಾವಿಸಿದೆವು. ನಾವು ನೋಡಲು ಹೋದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ನಾವು ಭದ್ರತಾ ಸಿಬ್ಬಂದಿಯನ್ನು ಸಂಪರ್ಕಿಸಿದೆವು. ಆತನನ್ನು ಹಜಿನ್‌ಗೆ ಕರೆತರಲಾಯಿತು. ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದ ಎಂದು ಮೃತನ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ರಾಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ನಾಲ್ವರು ಯೋಧರನ್ನು ಕೊಂದ ಬೆನ್ನಲ್ಲೇ ಈ ದಾಳಿ ನಡೆದಿದೆ.

Leave a Reply

Your email address will not be published.