Home Crime ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ; ಪರಿಶೀಲನೆ

ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ; ಪರಿಶೀಲನೆ

ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ; ಪರಿಶೀಲನೆ

393
0

ವರದಿ: ನಾ.ಅಶ್ವಥ್ ಕುಮಾರ್

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಚಾಮರಾಜನಗರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಆಸ್ಪತ್ರೆಯಲ್ಲಿನ ಕುಂದುಕೊರತೆಗೆಳನ್ನು ಪರಿಶೀಲಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ನಂತರ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.ಸೋಮವಾರ ಬೆಳಗ್ಗೆ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಸೌಕರ್ಯಗಳ ಕುರಿತು ಆಡಳಿತ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದರು.

ಆಸ್ಪತ್ರೆಯಲ್ಲಿ ಇದುವರೆವಿಗೆ ದಾಖಲಾಗಿರುವ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಗುಣಮುಖರಾದವರು ಹಾಗೂ ಸೋಂಕಿನಿಂದ ಸಾವನ್ನಪ್ಪಿದವರ ಮಾಹಿತಿ ಪಡೆದರು. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡವರಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಿರುವುದಾಗಿಯೂ ಮತ್ತು ಗುಣಮಟ್ಟದ ಆರೈಕೆಯನ್ನು ನೀಡುತ್ತಿರುವುದಾಗಿ ವೈದ್ಯಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.

ಇದೆ ಸಂಧರ್ಭದಲ್ಲಿ ಈ ಹಿಂದೆ ಚಾಮರಾಜನಗರ ಜಿಲ್ಲಾಧಿಕಾರಿಗಳಾಗಿ ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿದ್ದ ಜನತೆಯ ನೆಚ್ಚಿನ ಅಧಿಕಾರಿ ಬಿ.ಬಿ.ಕಾವೇರಿಯವರೇ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ನೇಮಕವಾಗಬೇಕು ಎಂದು ಜನತೆಯ ಒಕ್ಕೂರುಲಿನ ಮನವಿಯಾಗಿರುವುದು ವಿಶೇಷವಾಗಿದೆ.


VIAಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ; ಪರಿಶೀಲನೆ
SOURCEಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ; ಪರಿಶೀಲನೆ
Previous articleಹಸಿದವರ ಹೊಟ್ಟೆಗೆ ಆಸರೆಯಾದ ಶಿವರಾಜ್ ಕುಮಾರ್
Next articleಏನಾಗಲಿದೆ ಲಾಕ್ ಡೌನ್ ಭವಿಷ್ಯ?

LEAVE A REPLY

Please enter your comment!
Please enter your name here