ಗುರೂಜಿಯನ್ನು 60 ಬಾರಿ ಇರಿದು ಕೊಂದ ಹಂತಕರು..! ಭೀಕರ ದೃಶ್ಯ ನೋಡಿ

ಜಿಲ್ಲೆ

ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು. ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. “ಜುಲೈ 2 ರಂದು ಹೋಟೆಲ್‌ಗೆ ಆಗಮಿಸಿದ್ದ ಚಂದ್ರಶೇಖರ್‌ ಗುರೂಜಿ ನಾಳೆ ಹೋಟೆಲ್‌ ರೂಮ್‌ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪ್ಶನ್‌ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಅವರಿಗೆ ಚಾಕು ಇರಿದಿದ್ದಾರೆ’ ಎಂದು ಹೋಟೆಲ್‌ ಸಿಬ್ಬಂದಿ ತಿಳಿಸಿದ್ದಾರೆ.

Leave a Reply

Your email address will not be published.