ಹಲಸಿನಹಣ್ಣು ಕೀಳಲು ಹೋಗಿದ್ದ ವೇಳೆ ವಿದ್ಯುತ್ ತಂತಿ ತುಳಿದು ಯುವಕ ಸಾವು..!

ಜಿಲ್ಲೆ

ತುಮಕೂರು: ವಿದ್ಯುತ್​ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ನಡೆದಿದೆ.ಬೊಮ್ಮನಳ್ಳಿಯ ನಿವಾಸಿ ರಮೇಶ್ (20) ಮೃತ ದುರ್ದೈವಿ.ರಮೇಶ್, ಹಲಸಿನ ಹಣ್ಣು ಕೀಳಲು ಮರವೇರಿದ್ದು, ಈ ವೇಳೆ ವಿದ್ಯುತ್​ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪಾವಗಡ ಶಾಸಕ ವೆಂಕಟರವಣಪ್ಪ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published.