ಹರ್ ಗರ್ ತಿರಂಗಾ ಅಭಿಯಾನ: ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಚಾಲನೆ

ಜಿಲ್ಲೆ

ಗದಗ :ಹರ್ ಗರ್ ತಿರಂಗಾ ಅಭಿಯಾನದ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಆರಂಭವಾದ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಚಾಲನೆ ನೀಡಿದರು. ಗದಗ ಜಿಲ್ಲಾಡಳಿತ ಭವನದಿಂದ ಆರಂಭವಾದ ಹರ್ ಘರ ತಿರಂಗಾ ಅಭಿಯಾನವು ಟಿಪ್ಪು ಸುಲ್ತಾನ್ ವೃತ್ತ, ಮುಳಗುಂದ ನಾಕಾ, ಕಿತ್ತೂರ ಚನ್ನಮ್ಮ ವೃತ್ತದ ಮೂಲಕ ಭೀಷ್ಮ ಕೆರೆ ಆವರಣದಲ್ಲಿರೋ ಬಸವೇಶ್ವರ ಮೂರ್ತಿಯ ಹತ್ತಿರ ಮುಕ್ತಾಯವಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿ. ಪ. ಸದಸ್ಯ ಎಸ್ ವಿ ಸಂಕನೂರ ಆಗಸ್ಟ್ 13 ರಿಂದ 15 ರವರೆಗೆ ನಿರಂತರವಾಗಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಬೇಕು. ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಸಾರ್ವಜನಿಕರು ಯಶಸ್ವಿಗೊಳಿಸಬೇಕು ಎಂದರು. ಈ ಅಭಿಯಾನದಲ್ಲಿ ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.

Leave a Reply

Your email address will not be published.