Home District HDK “ವಿಷಕಂಠ” ಹೇಳಿಕೆಗೆ ಸಿದ್ದರಾಮಯ್ಯ ಗರಂ..!? “ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಲಿದೆ” ಎಂದು ವರಿಷ್ಠರ ಮುಂದೆ ಸಿದ್ದು...

HDK “ವಿಷಕಂಠ” ಹೇಳಿಕೆಗೆ ಸಿದ್ದರಾಮಯ್ಯ ಗರಂ..!? “ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಲಿದೆ” ಎಂದು ವರಿಷ್ಠರ ಮುಂದೆ ಸಿದ್ದು ಅಳಲು?!

451
0
SHARE

ಮೈತ್ರಿ ಸರ್ಕಾರದಲ್ಲಿ ಹಾಲಿ ಹಾಗೂ ಮಾಜಿ ಸಿಎಂಗಳ ನಡುವೆ ಬಿರುಕು ಮೂಡುತ್ತಲೇ ಇದೆ. ಸಿಎಂ ಕುಮಾರಸ್ವಾಮಿ ಕಳೆದ ಸರ್ಕಾರದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ, ಮಾಜಿ ಸಿಎಂ ಸಿದ್ದರಾಮಯ್ಯ ಆಗಾಗ ಕುಮಾರಸ್ವಾಮಿ ವಿರುದ್ಧ ಕತ್ತಿ ಮಸೆಯುತ್ತಲೇ ಇರುತ್ತಾರೆ. ಈಗ ಮತ್ತೊಮ್ಮೆ ಸಿದ್ದರಾಮಯ್ಯ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ…

ವಿಷಕಂಠನಂತೆ ನೋವು ನುಂಗುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗ್ತಿದೆ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ…

ಇನ್ನೂ ಕಾಂಗ್ರೆಸ್ ಕುಮಾರಸ್ವಾಮಿಗೆ ಕಾಂಗ್ರೆಸ್ ಕಾಟ ನೀಡ್ತಿದೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಗಮನಕ್ಕೆ ಸಿದ್ದರಾಮಯ್ಯ ತಂದಿದ್ದಾರೆ, ಇನ್ನೂ ಈ ಬಗ್ಗೆ ಮುಂದಿನ ಸಮನ್ವಯ ಸಮಿತಿ ಸಭೆಯಲ್ಲಿ ನೇರವಾಗಿ ಕುಮಾರಸ್ವಾಮಿ ಪ್ರಶ್ನೆ ಮಾಡೋಣ ಎಂದು ವೇಣುಗೋಪಾಲ್ ಹೇಳಿದ್ದಾರೆ., ಈ ಹಿನ್ನೆಲೆಯಲ್ಲಿ ಮುಂದಿನ ವಾರ ಸಮನ್ವಯ ಸಮಿತಿ ಸಭೆ ನಡೆಸಲು ನಿರ್ಧರಿಸಲಾಗಿದೆ…

LEAVE A REPLY

Please enter your comment!
Please enter your name here