
ಪಾದಯಾತ್ರೆಯಿಂದ ನೀರು ಬರುವುದೇ ಆಗಿದ್ದರೆ ಎಲ್ಲರೂ ಪಾದಯಾತ್ರೆ ಮಾಡುತ್ತಿದ್ದರು: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು:ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ನೀರು ಬರುವುದಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಿಂದ ನೀರು ಬರುವುದೇ ಆಗಿದ್ದರೆ ಎಲ್ಲರೂ ಪಾದಯಾತ್ರೆ ಮಾಡುತ್ತಿದ್ದರು. ಬೆಂಗಳೂರಿಗೆ ಕಾವೇರಿ ನೀರು ಬಂದಿರುವುದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಬಿಜೆಪಿಯ ಪ್ರಯತ್ನಗಳಿಂದ. ಕಾಂಗ್ರೆಸ್ ಪಕ್ಷದ ಪಾದಯಾತ್ರೆಯಿಂದ ಅಲ್ಲ ಎಂದು ಹೇಳಿದರು. ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ವಿಷಯದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪಕ್ಷದ ಸಲಹೆ ಬೇಕಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಏನು ಕೆಲಸ ಆಗಿದೆ ಎಂಬುದನ್ನು ಆ ಪಕ್ಷದ ನಾಯಕರು ಬಹಿರಂಗವಾಗಿ ಹೇಳಲಿ’ ಎಂದು ತೇಜಸ್ವಿ ಸೂರ್ಯ ಸವಾಲ್ ಹಾಕಿದ್ದಾರೆ.