
ಭಾರೀ ಮಳೆ ಹಿನ್ನೆಲೆ: ಕೇದಾರನಾಥ ಯಾತ್ರೆ ಸ್ಥಗಿತ
ಡೆಹ್ರಾಡೂನ್: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೇದಾರನಾಥ ಯಾತ್ರೆ ಈ ವರ್ಷ ಮತ್ತೆ ಪ್ರಾರಂಭವಾಗಿತ್ತು. ಆದರೆ ಭಾರೀ ಮಳೆಯಿಂದಾಗಿ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಅಮರನಾಥ್ದಲ್ಲಿ ನಡೆದ ಘಟನೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ