ಹೇಮಂತ್ ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

ಬೆಂಗಳೂರು

ಬೆಂಗಳೂರು: ತನ್ನ ಹುಟ್ಟುಹಬ್ಬ ದಿನದಂದೇ ಬರ್ಬರವಾಗಿ ಹತ್ಯೆಗೊಳಗಾಗಿದ್ದ ಯುವಕ ಹೇಮಂತ್ ಕುಮಾರ್ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಬಾಲ ಆರೋಪಿಗಳನ್ನು ಬಳಸಿಕೊಂಡು ಕೊಲೆ ಮಾಡಿಸಿದರೆ ತಮಗೆ ಏನು ಆಗುವುದಿಲ್ಲ ಎಂದು ಭಾವಿಸಿದ ಕುಖ್ಯಾತ ರೌಡಿಶೀಟರ್ ರಿಜ್ವಾನ್ ಪಾಷಾ ಅಲಿಯಾಸ್ ಕುಳ್ಳ ರಿಜ್ವಾನ್ ಕಾನೂನು ಸಂಘರ್ಷಕ್ಕೆ ಒಳಗಾದವರನ್ನು ಮುಂದಿಟ್ಟು ಹತ್ಯೆ ಮಾಡಿಸಿರುವುದು ತನಿಖೆ ವೇಳೆ ಬಹಿರಂಗವಾಗಿದೆ.

ಈ ಪ್ರಕರಣದಲ್ಲಿ ಕುಳ್ಳು ರಿಜ್ವಾನ್ ಸಹಚರ ಹರೀಶ್ನನ್ನು ಬಂಧಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಬಾಲ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕೆಂಪೇಗೌಡನಗರ ಪೊಲೀಸರಿಂದ ಬಂಧಿತನಾಗಿರುವ ಕುಳ್ಳ ರಿಜ್ವಾನ್ ನ ಮುಂದಿನ ದಿನಗಳಲ್ಲಿ ಬಾಡಿ ವಾರಂಟ್ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

 

Leave a Reply

Your email address will not be published.