ಹಿಜಾಬ್ ವಿವಾದ: ಅರ್ಜಿಗಳ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು

ಬೆಂಗಳೂರುಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠವು ಸೋಮವಾರಕ್ಕೆ ಮುಂದೂಡಿದೆ. ಈ ಕುರಿತಂತೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಷಮ್ ಹಾಗೂ ಇತರ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ 9 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಆದೇಶವನ್ನು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಸಮರ್ಥಿಸಿಕೊಂಡರು. ಸರ್ಕಾರದ ಆದೇಶ ಸರಿಯಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ ಅವರು, ಧಾರ್ಮಿಕ ಹಕ್ಕುಗಳ ಉಲ್ಲಂಘನೆ ಕುರಿತ ಆರೋಪಕ್ಕೆ ಉತ್ತರಿಸಲು ಕಾಲಾವಕಾಶ ಕೋರಿದರು. ವಾದ ಆಲಿಸಿದ ತ್ರಿಸದಸ್ಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.

 

Leave a Reply

Your email address will not be published.